ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಗುರುವಾರ, 21 ಮಾರ್ಚ್ 2019 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 
ಮೇಷ: ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸುವುದು. ವಿವಾಹಾಪೇಕ್ಷಿಗಳು ಕೆಲವು ಕಾಲ ಕಾಯಬೇಕಾಗುತ್ತದೆ. ಆರ್ಥಿಕವಾಗಿ ಚೇತರಿಕೆಯಿರುತ್ತದೆ. ಆದರೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ.
 
ವೃಷಭ: ಇದುವರೆಗೆ ಕಾಡುತ್ತಿದ್ದ ಆರೋಗ್ಯ ಸಮಸ್ಯೆಗೆ ಮುಕ್ತಿ ಸಿಗಲಿದೆ. ಆದರೆ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ತಲೆದೋರಲಿದ್ದು, ಮೌನವಾಗಿರುವುದೇ ಲೇಸು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ.
 
ಮಿಥುನ: ದಾಂಪತ್ಯದಲ್ಲಿ ಸುಖಕರ ದಿನಗಳಿವು. ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯುವಿರಿ. ಹಿತಶತ್ರುಗಳು ಬೆಂಬಿಡದೇ ಕಾಡಲಿದ್ದಾರೆ. ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
 
ಕರ್ಕಟಕ: ಕಾರ್ಯ ಕ್ಷೇತ್ರದಲ್ಲಿ ಆತ್ಮಸ್ಥೈರ್ಯದ ಕೊರತೆ ಕಾಣಲಿದೆ. ಆಂಜನೇಯ ಸ್ವಾಮಿಗೆ ವೀಳ್ಯದ ಮಾಲೆ ಅರ್ಪಿಸಿ ಹೊಸ ಕೆಲಸಗಳಿಗೆ ಕೈ ಹಾಕಿ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ವಿಳಂಬಗತಿಯ ಕಾರ್ಯಗಳಿಂದ ಚಿಂತೆಯಾಗುವುದು.
 
ಸಿಂಹ: ಆರೋಗ್ಯದ ಬಗ್ಗೆ ಅಲಕ್ಷ್ಯ ಬೇಡ. ಶತ್ರುಕಾಟ ತೋರಬರುವುದು. ಆದರೆ ದೇವರ ದರ್ಶನ, ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ, ಧೈರ್ಯ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.
 
ಕನ್ಯಾ: ಸಂಗಾತಿಯೊಡನೆ ಮನಸ್ತಾಪ ಮಾಡಿಕೊಳ್ಳುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸ್ತ್ರೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ. ಹೊಸ ವಸ್ತ್ರಾಭರಣಗಳ ಖರೀದಿ ಮಾಡುವಿರಿ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.
 
ತುಲಾ: ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಕೈಗೊಂಡ ಕಾರ್ಯಗಳಲ್ಲಿ ಸಣ್ಣಪುಟ್ಟ ವಿಘ್ನಗಳು ಎದುರಾದರೂ ಅಂತಿಮವಾಗಿ ಜಯ ಸಿಗುವುದು. ಆಸ್ತಿ ಖರೀದಿಗೆ ಮನಸ್ಸು ಮಾಡುವಿರಿ. ಅಧಿಕಾರಿ ವರ್ಗಕ್ಕೆ ಬಡ್ತಿ ಯೋಗವಿದೆ.
 
ವೃಶ್ಚಿಕ: ವಿದ್ಯಾರ್ಥಿಗಳು ಶಿಕ್ಷಕರಿಂದ ಪ್ರಶಂಸೆಗೊಳಗಾಗುವರು. ಆರೋಗ್ಯ ಭಾಗ್ಯ ಕೈಕೊಡುವುದು. ದೇವತಾ ಪ್ರಾರ್ಥನೆಯೊಂದಿಗೆ ನಡೆದರೆ ಕಾರ್ಯಸಿದ್ಧಿ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.
 
ಧನು: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ವ್ಯಾಪಾರ, ವಹಿವಾಟಿನಲ್ಲಿ ಕೊಂಚ ಮಟ್ಟಿಗಿನ ಹಿನ್ನಡೆ ಅನುಭವಿಸಬೇಕಾದೀತು. ಅನಿರೀಕ್ಷಿತ ಖರ್ಚುಗಳು ಎದುರಾಗುವುದು. ಆದರೆ ಸಾಂಸಾರಿಕವಾಗಿ ನೆಮ್ಮದಿ ಕಾಣುವಿರಿ.
 
ಮಕರ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ತೊಂದರೆ ಎದುರಿಸಬೇಕಾಗುತ್ತದೆ. ಅನಗತ್ಯ ಅಪವಾದಗಳಿಗೆ ಗುರಿಯಾಗುವಿರಿ. ದೇವತಾ ಪ್ರಾರ್ಥನೆ ಮಾಡಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಪ್ರಗತಿ.
 
ಕುಂಭ:  ದಾಯಾದಿ ಕಲಹಗಳು ತೋರಿಬರುವುದು. ಆಸ್ತಿ  ವಿಚಾರಕ್ಕೆ ಕೋರ್ಟು ಮೆಟ್ಟಿಲೇರಬೇಕಾಗುತ್ತದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ವೃತ್ತಿರಂಗದಲ್ಲಿ ಮುನ್ನಡೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
 
ಮೀನ: ಮನೆಯಲ್ಲಿ ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ಉದ್ಯೋಗ ನಿಮಿತ್ತ ವಿದೇಶ ಪ್ರಯಾಣ ಯೋಗವಿದೆ. ನಿರುದ್ಯೋಗಿಗಳು ಪಾಲಿಗೆ ಬಂದ ಅವಕಾಶ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಆಲಸ್ಯ ಮೂಡುವುದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ                         


ಇದರಲ್ಲಿ ಇನ್ನಷ್ಟು ಓದಿ :