ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 24 ನವೆಂಬರ್ 2021 (08:35 IST)
ಬೆಂಗಳೂರು: ಇಂದಿನ
ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಶಾರೀರಿಕ ಸೌಖ್ಯವಿದ್ದರೂ ಮಾನಸಿಕವಾಗಿ ಕೆಲವೊಂದು ವಿಚಾರಗಳು ನಿಮ್ಮನ್ನು ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಆರ್ಥಿಕವಾಗಿ ಭವಿಷ್ಯಕ್ಕಾಗಿ ಕೆಲವು ಯೋಜನೆ ಹಾಕಿಕೊಳ‍್ಳಲಿದ್ದೀರಿ.

ವೃಷಭ: ಉತ್ತಮ ವಾಕ್ಚತುರತೆಯಿಂದ ನಿಮ್ಮ ಕಾರ್ಯಸಾಧನೆ ಮಾಡಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೂ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ.


ಮಿಥುನ: ನಿಮ್ಮ ಮಾತಿನ ಮೇಲೆ ನಿಗಾ ಇಲ್ಲದೇ ಇದ್ದರೆ ಸಂಘರ್ಷಗಳಾದೀತು. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಮುನ್ನಡೆ ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿ.


ಕರ್ಕಟಕ: ಮಕ್ಕಳ ವಿಚಾರದಲ್ಲಿ ದಂಪತಿಗಳ ನಡುವೆ ವೈಮನಸ್ಯ ಏರ್ಪಟ್ಟೀತು. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ದೊರೆಯಲಿವೆ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಯಿಂದ ಖರ್ಚು ವೆಚ್ಚಗಳಾಗಲಿವೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.


ಕನ್ಯಾ: ದೂರದ ಬಂಧುಮಿತ್ರರ ಭೇಟಿಯಾಗಲಿದ್ದೀರಿ. ಉದ್ಯೋಗ, ವ್ಯವಹಾರ ನಿಮಿತ್ತ ಪ್ರಯಾಣ ಮಾಡುವ ಸಾಧ್ಯತೆ. ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕಂಡುಬರಲಿದೆ. ಕೃಷಿಕರಿಗೆ ಬೆಳೆ ನಷ್ಟದ ಭೀತಿ ಕಾಡಲಿದೆ.


ತುಲಾ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗಲಿದೆ.

ವೃಶ್ಚಿಕ: ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ಉದ್ಯಮಿಗಳಿಗೆ ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಪ್ರೀತಿ ಪಾತ್ರರಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗಿ ಬರಲಿದೆ.


ಧನು: ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಗೌರವ ಪ್ರೀತಿ ಸಂಪಾದನೆ ಮಾಡಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ದಾರಿಗಳು ಹೆಗಲಿಗೇರಲಿವೆ. ಮಕ್ಕಳ ಕ್ಷೇಮಕ್ಕಾಗಿ ಕೆಲವೊಂದು ನಿರ್ಧಾರ ಕೈಗೊಳ‍್ಳಲಿದ್ದೀರಿ. ತಾಳ್ಮೆ, ಸಂಯಮ ಅಗತ್ಯ.

ಮಕರ: ನಿರುದ್ಯೋಗಿಗಳ ಉದ್ಯೋಗ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆಯಿದೆ.


ಕುಂಭ: ಬಹಳ ದಿನಗಳಿಂದ ಕಾಡುತ್ತಿದ್ದ ವಿಚಾರಗಳಿಗೆ ಅಂತ್ಯ ಹಾಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಬಂಧು ಮಿತ್ರರ ಸಹಕಾರದಿಂದ ನಿಮ್ಮ ಕೆಲಸಗಳು ನೆರವೇರಲಿದೆ.


ಮೀನ: ದಾಯಾದಿ ಕಲಹಗಳಿಗೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಲಗಳು ಮರುಪಾವತಿಯಾಗಲಿದೆ. ನಿಮ್ಮಿಂದ ಸಹಾಯ ಪಡೆದವರಿಂದ ಪ್ರತ್ಯುಪಕಾರ ಲಭಿಸಲಿದೆ.


ಇದರಲ್ಲಿ ಇನ್ನಷ್ಟು ಓದಿ :