ಭಾರತ-ವೆಸ್ಟ್ ಇಂಡೀಸ್ ಏಕದಿನ: ಈ ಸಲ ಕಪ್ ಯಾರದ್ದು?

ಕಟಕ್| Krishnaveni K| Last Modified ಭಾನುವಾರ, 22 ಡಿಸೆಂಬರ್ 2019 (09:09 IST)
ಕಟಕ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಅಂತಿಮ ಮತ್ತು ನಿರ್ಣಾಯಕ ಏಕದಿನ ಪಂದ್ಯ ನಡೆಯಲಿದ್ದು, ಇಂದು ಗೆದ್ದವರು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ.

 
ದುರ್ಬಲವೆಂದೇ ಅಂದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡ ಶೈ ಹೋಪ್ ಮತ್ತು ಶಿಮ್ರಾನ್ ಹೆಟ್ ಮ್ಯಾರ್ ಅಬ್ಬರದ ಬ್ಯಾಟಿಂಗ್ ಮತ್ತು ಅದ್ಭುತ ಫೀಲ್ಡಿಂಗ್ ನಿಂದಾಗಿ ಟೀಂ ಇಂಡಿಯಾಗೆ ದೊಡ್ಡ ತಲೆನೋವಾಗಿದೆ. ಎಷ್ಟೇ ದೊಡ್ಡ ಮೊತ್ತವಾದರೂ ಆತ್ಮವಿಶ್ವಾಸದಿಂದ ಬೆನ್ನತ್ತುವ ಕಾರಣಕ್ಕೆ ಟೀಂ ಇಂಡಿಯಾಗೆ ದೊಡ್ಡ ಮೊತ್ತ ಕಲೆ ಹಾಕುವ ಒತ್ತಡ ಎದುರಾಗಿದೆ.
 
ಕಳೆದ ಪಂದ್ಯದಲ್ಲಿ ತನ್ನ ಸಾಮರ್ಥ್ಯಕ್ಕೆ ಆಟವಾಡಿದ್ದ ಟೀಂ ಇಂಡಿಯಾ ಈ ಪಂದ್ಯದಲ್ಲೂ ಅದೇ ತಂಡದೊಂದಿಗೆ ಅದೇ ಪ್ರದರ್ಶನ ಕಾದುಕೊಂಡು ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ. ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.
ಇದರಲ್ಲಿ ಇನ್ನಷ್ಟು ಓದಿ :