ಸಿಡ್ನಿ|
Krishnaveni K|
Last Modified ಮಂಗಳವಾರ, 12 ಜನವರಿ 2021 (09:58 IST)
ಸಿಡ್ನಿ: ಕೈ ಬೆರಳಿನ ಮುರಿತಕ್ಕೊಳಗಾಗಿರುವ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಸಿಡ್ನಿಯಲ್ಲಿ ಶಸ್ತ್ರಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ಜಡೇಜಾ ನೇರವಾಗಿ ಬೆಂಗಳೂರಿಗೆ ಬಂದು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಎರಡು ಪಂದ್ಯಗಳಿಂದಲೂ ಜಡೇಜಾ ಗೈರಾಗಲಿದ್ದಾರೆ. ಈ ಆಸ್ಟ್ರೇಲಿಯಾ ಪ್ರವಾಸ ಮುಗಿದೊಡನೆ ಟೀಂ ಇಂಡಿಯಾ ಪ್ರಮುಖರೆಲ್ಲಾ ಗಾಯಗೊಂಡು ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದಂತೂ ಖಂಡಿತಾ.