ವಿಂಡೀಸ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡ ಟೀಂ ಇಂಡಿಯಾ

ಫ್ಲೋರಿಡಾ| Krishnaveni K| Last Modified ಬುಧವಾರ, 7 ಆಗಸ್ಟ್ 2019 (07:35 IST)
ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಟಿ20 ಸರಣಿಯ ಅಂತಿಮ ಪಂದ್ಯವನ್ನು 7 ವಿಕೆಟ್ ಗಳಿಂದ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

 
ನಿನ್ನೆ ನಡೆದ ತೃತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ದೀಪಕ್ ಚಹರ್ 3 ವಿಕೆಟ್, ನವದೀಪ್ ಶೈನಿ 2 ವಿಕೆಟ್ ಕಬಳಿಸಿದರು.
 
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಭಾರತ ಮೂರು ಎಸೆತಗಳು ಬಾಕಿ ಇರುವಂತೇ 3 ವಿಕಟ್ ಕಳೆದುಕೊಂಡು 150 ರನ್ ಗಳಿಸಿ ಗುರಿಮುಟ್ಟಿತು. ನಿನ್ನೆ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿತ್ತು. ಅವರ ಸ್ಥಾನದಲ್ಲಿ ಕೆಎಲ್ ರಾಹುಲ್ ಗೆ ಅವಕಾಶ ಸಿಕ್ಕಿತ್ತು. ರಿಷಬ್ ಪಂತ್ 42 ಎಸೆತಗಳಲ್ಲಿ 65 ರನ್ ಮತ್ತು ನಾಯಕ ಕೊಹ್ಲಿ 45 ಎಸೆತದಿಂದ 59 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಇದರಲ್ಲಿ ಇನ್ನಷ್ಟು ಓದಿ :