ಕೊಹ್ಲಿ ರಾಜೀನಾಮೆ ವದಂತಿ ತಳ್ಳಿ ಹಾಕಿದ ಬಿಸಿಸಿಐ

ಮುಂಬೈ| Krishnaveni K| Last Modified ಸೋಮವಾರ, 13 ಸೆಪ್ಟಂಬರ್ 2021 (16:32 IST)
ಮುಂಬೈ: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಸೀಮಿತ ಓವರ್ ಗಳ ಕ್ರಿಕೆಟ್ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿಯಲಿದ್ದಾರೆ ಎಂಬ ಸುದ್ದಿಯನ್ನು ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ತಳ್ಳಿಹಾಕಿದ್ದಾರೆ.

 
ಕೊಹ್ಲಿ ತಮ್ಮ ಬ್ಯಾಟಿಂಗ್ ಕಡೆಗೆ ಗಮನ ಕೊಡುವ ಉದ್ದೇಶದಿಂದ ವಿಶ್ವಕಪ್ ಬಳಿಕ ನಾಯಕತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ. ರೋಹಿತ್ ಶರ್ಮಾ ಟೀಂ ಇಂಡಿಯಾ ಸೀಮಿತ ಓವರ್ ಗಳಿಗೆ ನಾಯಕರಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.
 
ಇದನ್ನು ಅರುಣ್ ಧಮಾಲ್ ತಳ್ಳಿ ಹಾಕಿದ್ದು, ಕೊಹ್ಲಿಯೇ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದಿದ್ದಾರೆ.ಎಲ್ಲಾ ಮೂರೂ ಮಾದರಿಯ ಕ್ರಿಕೆಟ್ ಗೆ ಟೀಂ ಇಂಡಿಯಾ ನಾಯಕರಾಗಿ ಕೊಹ್ಲಿಯೇ ಮುಂದುವರಿಯಲಿದ್ದಾರೆ ಎಂದು ಅರುಣ್ ಸ್ಪಷ್ಟಪಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :