Widgets Magazine

ಗಾಯಮಾಡಿಕೊಂಡ ಕೆಎಲ್ ರಾಹುಲ್

ಲಂಡನ್| Krishnaveni K| Last Modified ಸೋಮವಾರ, 1 ಜುಲೈ 2019 (09:31 IST)
ಲಂಡನ್: ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಫೀಲ್ಡಿಂಗ್ ವೇಳೆ ಕ್ಯಾಚ್ ಪಡೆಯಲು ಹೋಗಿ ಬೆನ್ನಿಗೆ ಗಾಯ ಮಾಡಿಕೊಂಡಿದ್ದಾರೆ.

 

ಬೌಂಡರಿ ಗೆರೆ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ರಾಹುಲ್ ಕಠಿಣ ಕ್ಯಾಚ್ ಹಿಡಿಯುವ ಯತ್ನದಲ್ಲಿ ಆಯತಪ್ಪಿ ಬಿದ್ದಿದ್ದು, ಬಳಿಕ ಪೆವಿಲಿಯನ್ ಗೆ ಮರಳಬೇಕಾಯಿತು.
 
ರಾಹುಲ್ ಅನುಪಸ್ಥಿತಿಯಲ್ಲಿ ರವೀಂದ್ರ ಜಡೇಜಾ ಫೀಲ್ಡಿಂಗ್ ಮಾಡಬೇಕಾಯಿತು. ಈಗಾಗಲೇ ಶಿಖರ್ ಧವನ್ ಗಾಯಗೊಂಡು ಆರಂಭಿಕರಾಗಿ ರಾಹುಲ್ ಕಣಕ್ಕಿಳಿಯುತ್ತಿದ್ದರು. ಇದೀಗ ರಾಹುಲ್ ಕೂಡಾ ಗಾಯಮಾಡಿಕೊಂಡಿರುವುದು ಟೀಂ ಇಂಡಿಯಾಗೆ ದೊಡ್ಡ ಆಘಾತವೇ ಸರಿ.
ಇದರಲ್ಲಿ ಇನ್ನಷ್ಟು ಓದಿ :