ಚೆನ್ನೈ: ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕೊನೆಯ ಕಾರ್ಯದರ್ಶಿ 91 ವರ್ಷ ವಯಸ್ಸಿನ ವಿ. ಕಲ್ಯಾಣಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೇರಿದ್ದಾರೆ. ಜನೆವರಿ 24 ರಂದು ವಿ.ಕಲ್ಯಾಣಂ ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರರು ತಿಳಿಸಿದ್ದಾರೆ.