ಬಿಹಾರ್ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ| Rajesh patil| Last Updated: ಶನಿವಾರ, 17 ಮೇ 2014 (17:19 IST)
ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ನಿತೀಶ್ ಕುಮಾರ್, ರಾಜ್ಯದಲ್ಲಿ ಕೇವಲ ಎರಡು ಲೋಕಸಭೆ ಸ್ಥಾನಗಳಲ್ಲಿ ಪಕ್ಷ ಗೆಲ್ಲಲು ಸಾಧ್ಯವಾಗಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ.
ಬಿಹಾರ್ ರಾಜ್ಯದಲ್ಲಿ ಜೆಡಿಯು ಸರಕಾರವಿದ್ದರೂ ಲೋಕಸಭೆ ಚುನಾವಣೆಯಲ್ಲಿ ಜೆಡಿಯು ಪಕ್ಷ ಕಳಪೆ ಪ್ರದರ್ಶನ ನೀಡಿದ್ದರಿಂದ, ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :