ರಿಮೇಕ್ ಚಿತ್ರಗಳಿಗೆ ತೆರಿಗೆ ವಿನಾಯಿತಿ
ಬೆಂಗಳೂರು, ಬುಧವಾರ, 20 ಜೂನ್ 2007( 16:55 IST )
ರಿಮೇ ಕ್ ಚಿತ್ರಗಳಿಗೆ ತೆರಿಗೆ ವಿನಾಯಿತಿ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಮಂಗಳವಾರ ಕನ್ನಡ ಚಿತ್ರರಂಗದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ನಟ, ನಿರ್ದೇಶಕ, ನಿರ್ಮಾಪಕರು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.
ಕನ್ನಡದ ಎಲ್ಲಾ ಚಿತ್ರಗಳಿಗೂ ಸರ್ಕಾರ ಸಬ್ಸಿಡಿ ನೀಡಬೇಕು ಎಂಬ ಎನ್ನುವ ಚಿತ್ರೋದ್ಯಮದ ಬೇಡಿಕೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದಿದ್ದಾರೆ.
ಪರಭಾಷಾ ಚಿತ್ರದ ಹಾವಳಿ, ತೆರಿಗೆ ವಿನಾಯಿತಿ, ಚಿತ್ರನಗರಿ ನಿರ್ಮಾಣ ಸೇರಿದಂತೆ, ಹಲವು ಸಮಸ್ಯೆಗಳನ್ನು ಕನ್ನಡ ಚಿತ್ರರಂಗ ಎದುರಿಸುತ್ತಿದ್ದು, ಅವುಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಕನ್ನಡ ಚಿತ್ರರಂಗ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ.