ರಾಂಬಾಬು ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ಸೂರಪ್ಪ ಬಾಬು ಮತ್ತು ಎನ್.ಎಸ್ ರಾಜ್‌ಕುಮಾರ್ ನಿರ್ಮಿಸುತ್ತಿರುವ ಅದ್ದೂರಿ ಚಿತ್ರ ಪೃಥ್ವಿ ಹತ್ತು ದಿವಸಗಳ ಕಾಲ ವಿಶಾಖಪಟ್ಟಣದ ಹಲವು ಕಡೆಗಳಲ್ಲಿ ಚಿತ್ರೀಕರಣ ಮುಗಿಸಿ ಇದೀಗ ನಗರಕ್ಕೆ ವಾಪಸ್ಸಾಗಿದೆ.
ಚಿತ್ರಕ್ಕಾಗಿ ಪುನೀತ್ ರಾಜ್‌ಕುಮಾರ್, ಪಾರ್ವತಿ ಭಾಗವಹಿಸಿದ ಹಲವಾರು ಸನ್ನಿವೇಶಗಳನ್ನು ವಿಶಾಖಪಟ್ಟಣದ ಸುತ್ತಮುತ್ತ ಸತ್ಯ ಅವರ ಛಾಯಾಗ್ರಹಣದಲ್ಲಿ ನಿರ್ದೇಶಕ ಜೇಕಬ್ ವರ್ಗಿಸ್ ಚಿತ್ರಿಸಿಕೊಂಡರು.
ಮಂದೆ ತುಮಕೂರಿನಲ್ಲಿ ಚಿತ್ರೀಕರಣ ಮುಂದುವರೆಯಲಿದೆ ಎಂದು ನಿರ್ಮಾಪಕ ಸೂರಪ್ಪ ಬಾಬು ತಿಳಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತವಿದ್ದು, ಕವಿರಾಜ್, ಕಲ್ಯಾಣ್ ಸಾಹಿತ್ಯ ರಚಿಸಿದ್ದದಾರೆ. ಪುನೀತ್, ಪಾರ್ವತಿ, ಶ್ರೀನಿವಾಸ ಮೂರ್ತಿ, ರಮೇಶ್ ಭಟ್, ಅವಿನಾಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.