ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಖ್ಯಾತ ರಂಗ ಕಲಾವಿದೆ ಚಿಂದೋಡಿ ಲೀಲಾ ತೀವ್ರ ಅಸ್ವಸ್ಥ (Chindodi Leela | Theatre | Shara Panjara)
ಸುದ್ದಿ/ಗಾಸಿಪ್
Bookmark and Share Feedback Print
 
ಖ್ಯಾತ ರಂಗಭೂಮಿ ಕಲಾವಿದೆ, ಚಿತ್ರನಟಿ ಚಿಂದೋಡಿ ಲೀಲಾ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ವೋಕ್ಹಾರ್ಟ್ ಆಸ್ಪತ್ರೆಗೆ ಅವರು ದಾಖಲಾಗಿದ್ದು ತೀರ್ವ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿಂದೆ ಹೃದಯಾಘಾತಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ಹತ್ತು ದಿನಗಳ ಹಿಂದಷ್ಟೇ ಅವರು ವೋಕ್ಹಾರ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಶಸ್ತ್ರಚಿಕಿತ್ಸೆ ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡರೂ, ಇದೀಗ ಮತ್ತೆ ಅವರ ಆರೋಗ್ಯ ತೀವ್ರ ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ದಶಕಗಳಿಂದ ವೃತ್ತಿರಂಗಭೂಮಿಯಲ್ಲಿ ಸಾಕಷ್ಟು ತೊಡಗಿಸಿಕೊಂಡಿದ್ದ ಚಿಂದೋಡಿ ಲೀಲಾ ರಂಗಭೂಮಿಯಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ್ದರು. ಅವರ ಪೋಲೀಸನ ಮಗಳು ನಾಟಕ ಬೆಂಗಳೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸತತ 1, 130ಕ್ಕೂ ಹೆಚ್ಚು ಪ್ರದರ್ಶನ ಕಂಡು ದಾಖಲೆ ನಿರ್ಮಿಸಿತ್ತು. ಇವರ ಹಳ್ಳಿಯ ಹುಡುಗಿ ನಾಟಕ ಕೂಡಾ ಸಾಕಷ್ಟು ಹೆಸರು ಮಾಡಿತ್ತು.

ಹಲವು ಚಲನಚಿತ್ರಗಳಲ್ಲೂ ಚಿಂದೋಡಿ ಲೀಲಾ ಅಭಿನಯಿಸಿದ್ದರು. ಶರಪಂಜರ, ತುಂಬಿದ ಕೊಡ, ಗಾನಯೋಗಿ ಪಂಚಾಕ್ಷರಿ ಗವಾಯಿಗಳಂಥ ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು. ಇದಲ್ಲದೆ, ಕರ್ನಾಟಕ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ನಾಟಕ ಮತ್ತು ಸಂಗೀತ ಅಕಾಡೆಮಿ ಪ್ರಶಸ್ತಿ, ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣದೇವರಾಯ ಪ್ರಶಸ್ತಿ, ನಾಡೋಜ ಪ್ರತಿಷ್ಠಾನದ ಕಾತ್ಯಾಯಿನಿ ಪ್ರಶಸ್ತಿಗಳು ಸೇರಿದಂತೆ ಹತ್ತು ಹಲವು ಪುರಸ್ಕಾರಗಳೂ ಸಂದಿವೆ. ಲೀಲಾ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸೋಣ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚಿಂದೋಡಿ ಲೀಲಾ, ರಂಗಭೂಮಿ, ಶರಪಂಜರ