ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಒಂದೇ ಬಾರಿಗೆ ತಯಾರಾಗುತ್ತಿರುವ ಕಾಫಿ ಶಾಪ್ ಚಿತ್ರ ಇದೀಗ ಬೆಳ್ಳಿ ಪರದೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಕಾಫಿ ಶಾಪ್ ಗೀತೆಗಳನ್ನು ಲೋಕಾರ್ಪಣೆ ಮಾಡಿದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ, ನಿರ್ಮಾಪಕರಾದ ಇ.ಕೃಷ್ಣಪ್ಪ, ರಾಕ್ಲೈನ್ ವೆಂಕಟೇಶ್ ಸಮಾರಂಭದಲ್ಲಿ ಹಾಜರಿದ್ದರು.
ಇದು ಸಂಪೂರ್ಣ ವಿಭಿನ್ನ ಕಥೆಯನ್ನು ಆದರಿಸಿದ ಚಿತ್ರ. ಪ್ರತಿಯೊಬ್ಬರಿಗೂ ಈ ಚಿತ್ರ ಹಿಡಿಸುತ್ತದೆ ಎಂದು ಚಿತ್ರದ ನಿರ್ದೇಶಕ ಗೀತಾ ಕೃಷ್ಣ ಕಾರ್ಯಕ್ರಮದಲ್ಲಿ ಹೇಳಿದರು. ನಾಯಕಿಯಾಗಿ ಬಿಯಾಂಕ ದೇಸಾಯಿ ಮತ್ತು ನಾಯಕನಾಗಿ ಶಶಾಂಕ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ಈ ಚಿತ್ರದ ಟ್ಯಾಗ್‌ಲೈನ್ ಏನಪ್ಪಾ ಅಂದರೆ 'ಈ ಸಿನೆಮಾ ನೀವು ಅಂದುಕೊಂಡ ಹಾಗೆ ಇಲ್ಲ!'