ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಕೈಟ್ಸ್ ಚಿತ್ರಕ್ಕೆ ತಡೆ; ಮಂಡಳಿ ಸದಸ್ಯರ ಬಂಧನ, ಬಿಡುಗಡೆ (Bollywood Film | Kites | Rakesh Roshan | Hrithik | Kannada Film | Kannada Cinema News)
ಸುದ್ದಿ/ಗಾಸಿಪ್
Bookmark and Share Feedback Print
 
ಬೆಂಗಳೂರು: ಬಾಲಿವುಡ್ ನಿರ್ಮಾಪಕ ರಾಕೇಶ್ ರೋಶನ್ ನಿರ್ಮಾಣದ ಕೈಟ್ಸ್ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ಬಸಂತ್ ಕುಮಾರ್ ಪಾಟೀಲ್ ನೇತೃತ್ವದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಡೆಯಾಜ್ಞೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯುತ್ತಿದ್ದ ಕೈಟ್ಸ್ ಚಿತ್ರ ಪ್ರದರ್ಶನಕ್ಕೆ ಮುತ್ತಿಗೆ ಹಾಕಲಾಗಿದೆ.

ನಗರದ ಮಲ್ಲೇಶ್ವರಂನಲ್ಲಿ ನಡೆಯುತ್ತಿದ್ದ ಕೈಟ್ಸ್ ಚಿತ್ರ ಪ್ರದರ್ಶನ ಸಂದರ್ಭದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ನಿಷೇಧದ ನಡುವೆಯೂ ನಗರದಲ್ಲಿ ಚಿತ್ರ ಪ್ರದರ್ಶನ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮಂಡಳಿ ಮುತ್ತಿಗೆ ಹಾಕಿತ್ತು. ಈ ಸಂದರ್ಭದಲ್ಲಿ ಅವರನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ.

ಇದೇ ವೇಳೆ ಚಿತ್ರ ಪ್ರದರ್ಶನಕ್ಕೆ ಮುಂಗಡ ಟಿಕೇಟ್ ಪಡೆದುಕೊಂಡ ವೀಕ್ಷಕರಿಗೆ ಹಣವನ್ನು ವಾಪಸ್ ಮಾಡುವುದಾಗಿ ಮಂಡಳಿ ತಿಳಿಸಿದೆ. ನಗರದ ಒಟ್ಟು 21 ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ಕೊನೆ ಗಳಿಗೆಯಲ್ಲಿ 150 ಚಿತ್ರಮಂದಿರಗಳಲ್ಲಿ ಬಿಡುಗಡೆಯ ಸಿದ್ಧತೆ ನಡೆಸಿತ್ತು. ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಪ್ರಿಂಟ್‌ಗಳನ್ನು ಬಿಡುಗಡೆ ಮಾಡಿ, ಚಿತ್ರಮಂದಿರಗಳಿಗೆ ನೀಡಲಾಗಿದೆ ಎಂಬುದು ಮಂಡಳಿಯ ಆರೋಪ.

ಅಲ್ಲದೆ, ಈ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ಕರೆದಿತ್ತಾದರೂ ಯಾರೊಬ್ಬರೂ ಹಾಜರಾಗದ ಕಾರಣ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಲಾಗಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಲಿವುಡ್ ಚಿತ್ರ ಕೈಟ್ಸ್, ಹೃತಿಕ್, ರಾಕೇಶ್ ರೋಶನ್, ಕನ್ನಡ ಸಿನಿಮಾ, ಕನ್ನಡ ಚಿತ್ರ