ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಬಗೆಹರಿದ ಕೈಟ್ಸ್ ವಿವಾದ: ಪ್ರದರ್ಶನ ಪುನರಾರಂಭ (Kites film kfc)
ಸುದ್ದಿ/ಗಾಸಿಪ್
Bookmark and Share Feedback Print
 
ಕೈಟ್ಸ್ ಚಿತ್ರ ಬಿಡುಗಡೆ ಕುರಿತು ಉಂಟಾಗಿದ್ದ ವಿವಾದ ಬಗೆಹರಿದಿದ್ದು, ಬೆಂಗಳೂರ ಸೇರಿದಂತೆ ದಕ್ಷಿಣ ಕರ್ನಾಟಕದಾದ್ಯಂತ ಪ್ರದರ್ಶನ ಮತ್ತೆ ಆರಂಭಗೊಂಡಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯಮದಂತೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ರಿಲಯನ್ಸ್ ಬಿಗ್ ಪಿಕ್ಚರ್ಸ್ ಮುಚ್ಚಳಿಕೆ ಪತ್ರ ಬರೆದುಕೊಟ್ಟು ಕ್ಷಮೆ ಯಾಚಿಸಿದ್ದರಿಂದ, ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿರುವುದಾಗಿ ಮಂಡಳಿ ಅಧ್ಯಕ್ಷ ಬಸಂತ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಫ್‌ಸಿ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಕರ್ನಾಟಕದಾದ್ಯಂತ ಕೈಟ್ಸ್ ಚಿತ್ರ ಪ್ರದರ್ಶನವನ್ನು ತಡೆಹಿಡಿಯಲಾಗಿತ್ತು ಎಂದು ತಿಳಿಸಿದ್ದಾರೆ.

ಅಲ್ಲದೆ, ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲೂ ಒಂದೇ ಸ್ಕ್ತ್ರೀನ್ ಪ್ರದರ್ಶನಕ್ಕೆ ವಿತರಕರು ಒಪ್ಪಿಕೊಂಡಿದ್ದಾರೆ. ಈಗಾಗಲೇ ದಕ್ಷಿಣ ಕರ್ನಾಟಕದಾದ್ಯಂತ 24 ಚಿತ್ರ ಮಂದಿರಗಳಲ್ಲಿ ಚಿತ್ರ ತೆರೆಕಂಡಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ತೊಂದರೆಯಾಗಬಾರದೆಂಬ ನಿಟ್ಟಿನಲ್ಲಿ ಮೂರು ಬೋನಸ್ ಚಿತ್ರಮಂದಿರಗಳನ್ನು ಉಳಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಪರಭಾಷ ಚಿತ್ರಕ್ಕೆ ಕರ್ನಾಟಕದಾದ್ಯಂತ ಒಬ್ಬನೇ ವಿತರಕರನ್ನು ನೇಮಿಸುವ ಕುರಿತು ಇತರ ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಫಿಲಂ ಫೆಡರೇಷನ್ ಆಫ್ ಇಂಡಿಯಾದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮಂಡಳಿಯ ಆದೇಶ ಉಲ್ಲಂಘಿಸಿ ಕೈಟ್ಸ್ ಚಿತ್ರ ಪ್ರದರ್ಶಿಸಿದ ನಗರದ ಕಾವೇರಿ ಚಿತ್ರ ಮಂದಿರಕ್ಕೆ ವಾಣಿಜ್ಯ ಮಂಡಳಿ ನಾಲ್ಕು ವಾರಗಳ ನಿಷೇಧ ಹೇರಿದೆ. ಅಲ್ಲದೆ, ಮಂಡಳಿಯಿಂದ ಮುಂದಿನ ಆದೇಶ ಬರುವರೆಗೂ ಚಿತ್ರ ಪ್ರದರ್ಶಿಸಬಾರದೆಂದು ಸೂಚನೆ ನೀಡಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೈಟ್ಸ್ ರಿಲಯನ್ಸ್ ಬಿಗ್ ಪಿಕ್ಚರ್ಸ್ ವಿವಾದ, ಕೆಎಫ್ಸಿ