ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಭಾರತಿ ವಿಷ್ಣುವರ್ಧನ್ ಚಲನಚಿತ್ರ ಪ್ರಶಸ್ತಿ ಸಲಹಾ ಸಮಿತಿ ಅಧ್ಯಕ್ಷೆ (Bharathi Vishnuvardhan | Kannada Film Award | K.C.N.Gowda | Sandal Wood)
PR
2009-10ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು ಭಾರತಿ ವಿಷ್ಣುವರ್ಧನ್ ಅಧ್ಯಕ್ಷತೆಯ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಚಲನಚಿತ್ರ ನಿರ್ದೇಶಕ ಮಹೇಂದ್ರ, ರಂಗಕರ್ಮಿ ಕಾಸರಗೋಡು ಚಿನ್ನ, ನಿರ್ದೇಶಕ ಎಂ.ಎಸ್.ರಾಜಶೇಖರ್, ಸಂಗೀತ ನಿರ್ದೇಶಕ ರಾಜನ್ (ನಾಗೇಂದ್ರ), ಕಲಾವಿದ ಲೋಹಿತಾಶ್ವ, ಸಾಹಿತಿ ಬೊಳುವಾರು ಮಹಮ್ಮದ್ ಕುಂಞ್ಞಿ , 'ಪ್ರಜಾವಾಣಿ' ಪತ್ರಿಕೆಯ ಹಿರಿಯ ಉಪ ಸಂಪಾದಕ ರಘುನಾಥ ಚ.ಹ. ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆಯ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.

ಸಹಾಯಧನ ಸಮಿತಿ: 2009-10ನೇ ಸಾಲಿನ ಕನ್ನಡ ಮತ್ತು ಪ್ರಾದೇಶಿಕ ಭಾಷೆಯ ಅರ್ಹ ಗುಣಾತ್ಮಕ ಚಲನಚಿತ್ರಗಳನ್ನು ಸಹಾಯಧನಕ್ಕೆ ಆಯ್ಕೆ ಮಾಡಲು ಸಲಹಾ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಿರ್ಮಾಪಕ ಕೆ.ಸಿ.ಎನ್. ಗೌಡ ಅವರು ಅಧ್ಯಕ್ಷರಾಗಿರುವ ಈ ಸಲಹಾ ಸಮಿತಿಯಲ್ಲಿ ಹಿರಿಯ ಕಲಾವಿದರಾದ ಜಯಂತಿ, ಶ್ರೀಧರ್ ಮತ್ತು ರಾಮಕೃಷ್ಣ, ಸಾಹಿತಿಗಳಾದ ಬಿ.ಆರ್. ಲಕ್ಷ್ಮಣ್ ರಾವ್ ಮತ್ತು ಬಾಬು ಕೃಷ್ಣಮೂರ್ತಿ, ಭಾರತೀಯ ಚಲನಚಿತ್ರ ಸಮಾಜದ ಅಧ್ಯಕ್ಷ ಎಚ್.ಎನ್. ನರಹರಿ ರಾವ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಸದಸ್ಯರಾಗಿರುತ್ತಾರೆ. ಸದಸ್ಯ ಕಾರ್ಯದರ್ಶಿಯಾಗಿ ವಾರ್ತಾ ಇಲಾಖೆಯ ನಿರ್ದೇಶಕರನ್ನು ನೇಮಕ ಮಾಡಲಾಗಿದೆ.
ಇವನ್ನೂ ಓದಿ