ಸುದ್ದಿ/ಗಾಸಿಪ್ | ಸಿನಿಮಾ ಮುನ್ನೋಟ | ಸಿನಿಮಾ ವಿಮರ್ಶೆ | ತಾರಾ ಪರಿಚಯ
ಮುಖ್ಯ ಪುಟ ಮನರಂಜನೆ » ಸ್ಯಾಂಡಲ್ ವುಡ್ » ಸುದ್ದಿ/ಗಾಸಿಪ್ » ಪತ್ನಿಗೆ ಮಾರಣಾಂತಿಕ ಹಲ್ಲೆ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ (Darshan Arrested for Assaulting Wife | Challenging Star Darshan | Kannada Actor Darshan | Vijayalaxmi)
ಹಿಂದಿನದು|ಮುಂದಿನದು
ಕಳೆದ ಸಂಜೆ ತಮ್ಮ ಪತ್ನಿಗೆ ಪಿಸ್ತೂಲ್ ತೋರಿಸಿ ಮಾರಣಾಂತಿಕ ಹಲ್ಲೆ ಮಾಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಶುಕ್ರವಾರ ಬೆಳಗ್ಗೆ ಪೊಲೀಸರು ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

Darshan
PR


ಪತ್ನಿ ವಿಜಯಲಕ್ಷ್ಮೀ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ದರ್ಶನ್ ಅವನ್ನು ವಿಜಯನಗರ ಪೊಲೀಸರಿಂದ ಬಂಧಿಸಲಾಗಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಒಟ್ಟು ಮೂರು ಪ್ರಕರಣಗಳಲ್ಲಿ ಕೇಸು ದಾಖಲಾಗಿದೆ.

ಇದೀಗ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯದ ಅಮಲಿನಲ್ಲಿದ್ದರು ಎಂಬುದು ಖಚಿತವಾಗಿದೆ. ಕೌಟುಂಬಿಕ ಕಲಹದಿಂದಾಗಿ ಪತ್ನಿ ವಿಜಯಲಕ್ಷ್ಮೀ ಹಾಗೂ ಮೂರು ವರ್ಷದ ಪುತ್ರನ ಮೇಲೆಯೂ ಹಲ್ಲೆ ನಡೆಸಿದ್ದರು.

ಗಂಭೀರ ಗಾಯಗೊಂಡಿರುವ ವಿಜಯಲಕ್ಷ್ಮೀ ಹಾಗೂ ಪುತ್ರರಿಗೆ ವಿಜಯನಗರದ ಗಾಯತ್ರಿ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಲಕ್ಷ್ಮೀ ಅವರನ್ನು ತುರ್ತು ವಿಭಾಗದಲ್ಲಿ ದಾಖಲಿಸಲಾಗಿದ್ದು, ತಲೆಗೆ ಮೂರು ಹೊಲಿಗೆ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದು ಮೂಲಗಳ ಪ್ರಕಾರ ಕಳೆದ ರಾತ್ರಿ ವಿಜಯಲಕ್ಷ್ಮೀ ಅವರು ತಮ್ಮ ಗೆಳತಿ ವಿದ್ಯಾ ಮನೆಯಲ್ಲಿ ತಂಗಿದ್ದರು. ಅಲ್ಲಿಗೆ ತೆರಳಿದ್ದ ದರ್ಶನ್ ಕುಡಿದ ಅಮಲಿನಲ್ಲಿಯೇ ಹಲ್ಲೆ ನಡೆಸಿದ್ದು, ಕೊಲೆ ಬೆದರಿಕೆಯನ್ನು ಹಾಕಿರುವುದಾಗಿ ತಿಳಿದು ಬಂದಿದೆ.

ಖ್ಯಾತ ನಟ ದಿವಂಗತ ತೂಗುದೀಪ ಶ್ರೀನಿವಾಸ್ ಅವರ ಪುತ್ರರಾಗಿರುವ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀ ನಡುವೆ ಈ ಹಿಂದೆಯೂ ಹಲವು ಬಾರಿ ವಿರಸವುಂಟಾಗಿತ್ತು. ಆದರೆ ಇದೀಗನ ಹಲ್ಲೆ ಪ್ರಕರಣ ಚಲನಚಿತ್ರ ರಂಗವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

ದರ್ಶನ್ ಮೇಲೆ ನಿಜವಾದ ಕೇಸು ಏನು?: ಮುಂದಿನ ಪುಟ ನೋಡಿ
ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಹಿಂದಿನದು|ಮುಂದಿನದು
ಇವನ್ನೂ ಓದಿ