ಲೇಖಕ ಪೆರುವೋಡಿ ನಾರಾಯಣ ಭಟ್ಟ ಅವರ ಕುರಿತು : ಅಭಿನಯದ ಸಹಜತೆ, ಅರ್ಥಗಾರಿಕೆಯಲ್ಲಿನ ಪಾತ್ರೌಚಿತ್ಯಗಳನ್ನು ಸದಾ ಕಾಪಾಡಿಕೊಂಡು ಬಂದ ಅಜಾತಶತ್ರು, ಯಕ್ಷಗಾನ ಹಾಸ್ಯ ಕಲಾವಿದ ಪೆರುವೋಡಿ ನಾರಾಯಣ ಭಟ್ಟರದ್ದು ಯಕ್ಷಗಾನ ಲೋಕದಲ್ಲಿ ದೊಡ್ಡ ಹೆಸರು. ಕಡಲ ತೀರದ ಭಾರ್ಗವ ಡಾ.ಶಿವರಾಮ ಕಾರಂತರು ಚಿತ್ರೀಕರಿಸಿದ ಯಕ್ಷಗಾನ ಸಿನಿಮಾದಿಂದ ಹಿಡಿದು ಯಕ್ಷಗಾನದ ಯಾವುದೇ ಪ್ರಸಂಗಕ್ಕೂ ಸೈ ಎನ್ನುವ ಭಟ್ಟರನ್ನು ಹಲವು ಪ್ರಶಸ್ತಿ, ಪುರಸ್ಕಾರಗಳು ಅರಸಿಕೊಂಡು ಬಂದಿದೆ. ಈ ಯಕ್ಷರಂಗದ ದಿಗ್ಗಜ ಪತ್ರಿಕೋದ್ಯಮದ ಇನ್ನೋರ್ವ ದಿಗ್ಗಜ ಪ.ಗೋಪಾಲಕೃಷ್ಣರ ಕುರಿತು ಆತ್ಮೀಯತೆಯಿಂದ ಬರೆದ ಪ.ಗೋ. ಕುರಿತಾದ ಭಟ್ಟರ ಮಾತುಗಳು ನಿಮಗಿಷ್ಟವಾದೀತು.
-----------
ದಕ್ಷಯಜ್ಞ ನೋಡಿ ಖುದ್ದು ಕ್ರುಶ್ಚೇವ್ ಕೈಕುಲುಕಿದ್ದರು!
1955ನೇ ಇಸ್ವಿ ಸೆಪ್ಟೆಂಬರ್ ತಿಂಗಳಲ್ಲಿ ಒಂದು ದಿವಸ ಪದ್ಯಾಣ ಗೋಪಾಲಕೃಷ್ಣ (ಪ.ಗೋ.) ನಮ್ಮ ಮನೆಯಲ್ಲಿ ಪ್ರತ್ಯಕ್ಷನಾದ. ಆತ ಮೈಸೂರಿನಿಂದ ಬಂದಿದ್ದ. ಪ್ರಸಿದ್ಧ ದಸರಾ (ವಸ್ತು ಪ್ರದರ್ಶನ)ದಲ್ಲಿ ಒಂದು ಯಕ್ಷಗಾನ ಬಯಲಾಟ ಪ್ರದರ್ಶನವನ್ನು ಏರ್ಪಾಡು ಮಾಡುವ ಪೂರ್ವ ಸಿದ್ಧತೆಗಾಗಿ ಆತ ಬಂದಿದ್ದ. ಧರ್ಮಸ್ಥಳ ಮೇಳದ ವ್ಯವಸ್ಥಾಪಕ ಸ್ಥಾನದಲ್ಲಿದ್ದ ಹಿರಿಯ ಕಲಾವಿದ ಕುರಿಯ ವಿಠಲ ಶಾಸ್ತ್ರಿ ಮೊದಲಾದವರನ್ನೆಲ್ಲ ಭೇಟಿ ಮಾಡಿಕೊಂಡೇ, ಆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನನ್ನನ್ನು ಆಹ್ವಾನಿಸಲು ಬಂದಿದ್ದ.WD |