ಕೊರೋನಾ ಲಸಿಕೆ ಪಡೆದ ನಟ ಜೆಕೆ

ಬೆಂಗಳೂರು| Krishnaveni K| Last Modified ಮಂಗಳವಾರ, 4 ಮೇ 2021 (09:55 IST)
ಬೆಂಗಳೂರು: 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಪಡೆದುಕೊಳ್ಳಬಹುದು ಎಂದು ಕೇಂದ್ರ ಅನುಮತಿ ನೀಡುತ್ತಿದ್ದಂತೇ ಸ್ಯಾಂಡಲ್ ವುಡ್ ನಟ ಜಯರಾಮ್ ಕಾರ್ತಿಕ್ ಅಲಿಯಾಸ್ ಜೆಕೆ ಲಸಿಕೆ ಪಡೆದುಕೊಂಡಿದ್ದಾರೆ.

 
ಬೆಂಗಳೂರಿನಲ್ಲಿ ಲಸಿಕೆ ಪಡೆದುಕೊಂಡ ಜೆಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಪ್ರಕಟಿಸಿದ್ದು, ನೀವೂ ಲಸಿಕೆ ಪಡೆದುಕೊಂಡು ಕೊವಿಡ್ ನಿಂದ ಸುರಕ್ಷಿತವಾಗಿರಿ ಎಂದು ಕರೆ ಕೊಟ್ಟಿದ್ದಾರೆ.
 
ಇದು ಮೊದಲನೆಯ ಡೋಸ್ ಆಗಿದ್ದು, ಇನ್ನು 28 ದಿನಗಳ ಬಳಿಕ ಮತ್ತೆ ಅವರು ಲಸಿಕೆ ಪಡೆದುಕೊಳ್ಳಬೇಕಾಗಿದೆ. ಈಗಾಗಲೇ ನಟರಾದ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಗಿರಿಜಾ ಲೋಕೇಶ್ ಸೇರಿದಂತೆ ಹಲವು ಸ್ಯಾಂಡಲ್ ವುಡ್ ಕಲಾವಿದರು ಲಸಿಕೆ ಪಡೆದುಕೊಂಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :