ರಾಜ್ ಶೆಟ್ಟಿ ಗರುಡಗಮನ ಸಿನಿಮಾಗೆ ಬಾಲಿವುಡ್ ನಿರ್ದೇಶಕನ ಮೆಚ್ಚುಗೆ

ಬೆಂಗಳೂರು| Krishnaveni K| Last Modified ಗುರುವಾರ, 25 ನವೆಂಬರ್ 2021 (11:00 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಬಿಡುಗಡೆಯಾದ ಗರುಡಗಮನ ವೃಷಭ ವಾಹನ ಸಿನಿಮಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾ ಈಗ ಬಾಲಿವುಡ್ ಮಂದಿಯ ಗಮನ ಸೆಳೆದಿದೆ.

ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ವಿಶಿಷ್ಟ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ.


ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಗರುಡಗಮನ ಸಿನಿಮಾ ಬಗ್ಗೆ ವಿಶೇಷವಾಗಿ ಅನುರಾಗ್ ಕಶ್ಯಪ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ತೆಲುಗು, ತಮಿಳು ರಂಗದವರಿಗೂ ಈ ಸಿನಿಮಾ ಇಷ್ಟವಾಗಿದೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :