ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಡೆಯ ಟೀಸರ್ ಇಂದು

ಬೆಂಗಳೂರು| Krishnaveni K| Last Modified ಶುಕ್ರವಾರ, 1 ನವೆಂಬರ್ 2019 (08:36 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗುತ್ತಿದೆ.

 
ಈ ಸಿನಿಮಾದ ಟೀಸರ್ ಗಾಗಿ ಈಗಾಗಲೇ ದರ್ಶನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಒಡೆಯ ಫಸ್ಟ್ ಲುಕ್ ನಲ್ಲಿ ದರ್ಶನ್ ಪಕ್ಕಾ ಸಾಂಪ್ರದಾಯಿಕ ಡ್ರೆಸ್ ನಲ್ಲಿ ಮಗುವನ್ನೆತ್ತಿಕೊಂಡ ದೃಶ್ಯ ನೋಡಿ ಅಭಿಮಾನಿಗಳ ಕಾತುರತೆ ಇನ್ನಷ್ಟು ಹೆಚ್ಚಾಗಿತ್ತು.
 
ಇಂದು ಬೆಳಿಗ್ಗೆ 9.55 ಕ್ಕೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡ ರಾಜ್ಯೋತ್ಸವಕ್ಕೆ ಡಿ ಬಾಸ್ ಅಭಿಮಾನಿಗಳಿಗೆ ಇದು ಭರ್ಜರಿ ಗಿಫ್ಟ್ ಆಗಲಿದೆ.
ಇದರಲ್ಲಿ ಇನ್ನಷ್ಟು ಓದಿ :