ನಟ ನಾಗಾರ್ಜುನ ಅಕ್ಕಿನೇನಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಹೈದರಾಬಾದ್| Krishnaveni K| Last Modified ಶುಕ್ರವಾರ, 20 ಸೆಪ್ಟಂಬರ್ 2019 (08:59 IST)
ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ನಾಗಾರ್ಜುನ ಅಕ್ಕಿನೇನಿ ಅವರಿಗೆ ಸೇರಿದ ತೋಟದಲ್ಲಿ ಕೊಳೆತ ಶವ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 
ನಟ ನಾಗಾರ್ಜುನ ಇತ್ತೀಚೆಗಷ್ಟೇ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ 40 ಎಕರೆ ಕೃಷಿ ಭೂಮಿ ಖರೀದಿಸಿದ್ದರು. ಇದೇ ಪರಿಸರದಲ್ಲಿ ಈಗ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
 
ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಬಹುಶಃ ಇದು ಆತ್ಮಹತ್ಯೆಯಾಗಿರಬಹುದು ಎಂದು ಶಂಕಿಸಿದ್ದಾರೆ. ಈ ಬಗ್ಗೆ ನಾಗಾರ್ಜುನ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಇದರಲ್ಲಿ ಇನ್ನಷ್ಟು ಓದಿ :