ಬಸವನಗುಡಿ ಠಾಣೆಗೆ ಇಂದು ಹಂಸಲೇಖ ಹಾಜರು!

ಬೆಂಗಳೂರು| Ramya kosira| Last Modified ಗುರುವಾರ, 25 ನವೆಂಬರ್ 2021 (12:36 IST)
ಬೆಂಗಳೂರು : ಪೇಜಾವರ ಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹಾಜರಾಗುವ ಸಾಧ್ಯತೆ ಇದೆ.
ಅವಹೇಳನಕಾರಿ ಹೇಳಿಕೆ ಸಂಬಂಧ ಹಂಸಲೇಖ ವಿರುದ್ಧ ದೂರು ದಾಖಲಾಗಿತ್ತು. ಅದರ ಆಧಾರದಲ್ಲಿ ವಿಚಾರಣೆಗೆ ಹಾಜರಾಗಲು ಪೊಲೀಸರು ಹಂಸಲೇಖಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ಅನಾರೋಗ್ಯದ ಕಾರಣ ನೀಡಿ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹಂಸಲೇಖ ಪರ ವಕೀಲರು 25ನೇ ತಾರೀಖು ವಿಚಾರಣೆಗೆ ಹಾಜರಾಗುವುದಾಗಿ ಈ ಹಿಂದೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹಂಸಲೇಖ ಬಸವನಗುಡಿ ಠಾಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಇದರಲ್ಲಿ ಇನ್ನಷ್ಟು ಓದಿ :