ಪೈಲ್ವಾನ್ ಆಯ್ತು, ಈಗ ಸೈರಾ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಅಭಿಮಾನಿಗಳ ಹೋರಾಟ

ಬೆಂಗಳೂರು| Krishnaveni K| Last Modified ಮಂಗಳವಾರ, 1 ಅಕ್ಟೋಬರ್ 2019 (09:22 IST)
ಬೆಂಗಳೂರು: ಪೈಲ್ವಾನ್ ಪೈರಸಿ ಆದ ವಿಚಾರದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ತಮ್ಮ  ಆಕ್ರೋಶ ವ್ಯಕ್ತಪಡಿಸಿದ್ದರಲ್ಲದೆ, ಕಿಚ್ಚನಿಗೆ ಬೆಂಬಲವಾಗಿ ನಿಂತಿದ್ದರು. ಈಗ ಸೈರಾ ನರಸಿಂಹ ರೆಡ್ಡಿ ಸಿನಿಮಾ ವಿಚಾರದಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು ಕನ್ನಡ ಹೋರಾಟ ಮಾಡುತ್ತಿದ್ದಾರೆ.

 
ತೆಲುಗು ಮೂಲದ ಸೈರಾ ನರಸಿಂಹ ರೆಡ್ಡಿ ಸಿನಿಮಾ ನಾಳೆ ಬಹುಭಾಷೆಗಳಲ್ಲಿ ತೆರೆಕಾಣುತ್ತಿದೆ. ಈ ಸಿನಿಮಾದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿದ್ದರೆ, ಕಿಚ್ಚ ಸುದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಕನ್ನಡಕ್ಕೂ ಡಬ್ ಆಗಿದೆ.
 
ಹಾಗಿದ್ದರೂ ಕರ್ನಾಟಕದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಕನ್ನಡಕ್ಕೆ ಡಬ್ ಆದ ಸಿನಿಮಾಗೆ ಕಡಿಮೆ ಪ್ರದರ್ಶನ ನೀಡಿ ತೆಲುಗು ಅವತರಣಿಕೆಗೆ ಹೆಚ್ಚು ಟೈಮ್ ಸ್ಲಾಟ್ ನೀಡಿರುವುದು ಕಿಚ್ಚನ ಅಭಿಮಾನಿಗಳನ್ನು ಕೆರಳಿಸಿದೆ. ಹೀಗಾಗಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ವಿರುದ್ಧ ಸಿಡಿದೆದ್ದಿರುವ ಕಿಚ್ಚನ  ಅಭಿಮಾನಿಗಳು ಕರ್ನಾಟಕದಲ್ಲಿ ಕನ್ನಡ ಅವತರಣಿಕೆಗೇ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಶುರು ಮಾಡಿದ್ದಾರೆ. ತೆಲುಗಿನಲ್ಲಿ ಬಿಡುಗಡೆ ಮಾಡಿ ಕನ್ನಡಿಗರಿಗೆ ವಂಚಿಸಬೇಡಿ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :