ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಇಂದು ವಿಚಾರಣೆ

ಬೆಂಗಳೂರು| Krishnaveni K| Last Modified ಗುರುವಾರ, 21 ಜನವರಿ 2021 (09:05 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

 
ಈ ಹಿಂದೆ ಸೆಷನ್ಸ್ ಮತ್ತು ಹೈಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು. ಆದರೆ ಸಿಸಿಬಿ ಪೊಲೀಸರು ಇನ್ನೂ ಪ್ರಕರಣ ತನಿಖೆಯ ಹಾದಿಯಲ್ಲಿರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸುತ್ತಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :