ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ರಿಷಬ್ ಶೆಟ್ಟಿ: ಹೊಸ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು| Krishnaveni K| Last Modified ಶನಿವಾರ, 15 ಫೆಬ್ರವರಿ 2020 (09:52 IST)
ಬೆಂಗಳೂರು: ‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿದ್ದ ರಾಜ್ ಬಿ ಶೆಟ್ಟಿ ಈಗ ತಮ್ಮದೇ ನಿರ್ದೇಶನದ ಹೊಸ ಸಿನಿಮಾವೊಂದರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ.

 
ವಿಶೇಷವೆಂದರೆ ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ನಾಯಕನಾಗಿರುತ್ತಾರೆ. ‘ಗರುಡ ಗಮನ ವೃಷಭ ವಾಹನ’ ಎಂದು ಟೈಟಲ್ ಇಡಲಾಗಿದೆ.
 
ಮಂಗಳೂರಿನ ಹಿನ್ನಲೆಯಲ್ಲಿ ನಡೆಯುವ ಗ್ಯಾಂಗ್ ಸ್ಟರ್ ಕಥೆ ಎಂದು ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ತಮ್ಮ ಸ್ನೇಹಿತರ ಜತೆಗೂಡಿ ಈ ಸಿನಿಮಾ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಜೂನ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಇದರಲ್ಲಿ ಇನ್ನಷ್ಟು ಓದಿ :