ಮೆಗಾಸ್ಟಾರ್ ಚಿರಂಜೀವಿಗೆ ಆಲ್ ದಿ ಬೆಸ್ಟ್ ಹೇಳಿದ ಶಿವಣ್ಣ

ಬೆಂಗಳೂರು| Krishnaveni K| Last Modified ಮಂಗಳವಾರ, 1 ಅಕ್ಟೋಬರ್ 2019 (09:19 IST)
ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಮತ್ತು ಬಹುತಾರಾಗಣವಿರುವ ಬಹುನಿರೀಕ್ಷಿತ ಸೈರಾ ನರಸಿಂಹ ರೆಡ್ಡಿ ಸಿನಿಮಾ ನಾಳೆ ತೆರೆ ಕಾಣುತ್ತಿದ್ದು, ಈ ಸಿನಿಮಾಗೆ ಸ್ಯಾಂಡಲ್ ವುಡ್ ಸ್ಟಾರ್ ಶಿವರಾಜ್ ಕುಮಾರ್ ಶುಭ ಕೋರಿದ್ದಾರೆ.

 
ಸೈರಾ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ನಲ್ಲಿ ಭಾಗವಹಿಸಿದ್ದ ಶಿವಣ್ಣ ಬಳಿಕ ತಮ್ಮ ಸೋಷಿಯಲ್ ಮೀಡಿಯಾ ಖಾತೆ ಮೂಲಕವೂ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣಲಿ ಎಂದು ಮೆಗಾಸ್ಟಾರ್ ಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
 
ಈ ನಡುವೆ ಸೈರಾ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡಾ ಅಭಿನಯಿಸಿದ್ದಾರೆ. ಆದರೆ ಈ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಅವರು ಭಾರತದಲ್ಲಿ ಇಲ್ಲ. ಸದ್ಯಕ್ಕೆ ಕೋಟಿಗೊಬ್ಬ 3 ಸಿನಿಮಾ ಶೂಟಿಂಗ್ ಗಾಗಿ ಟೊರೆಂಟೋದಲ್ಲಿರುವ ಸುದೀಪ್ ಅಲ್ಲಿಯೇ ಚಿತ್ರ ವೀಕ್ಷಿಸುವುದಾಗಿ ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :