ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಸೇರ್ಪಡೆಯಾಗುವುದು ನಿಶ್ಚಿತವಾಗಿದೆ. ಜನೆವರಿ 18 ರಂದು ಬಿಜೆಪಿ ಮತ್ತು ಕೆಜೆಪಿ ಪಕ್ಷಗಳು ವಿಲೀನವಾಗಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಪ್ರಧಾನಿಯಾಗಿಸಲು ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 22 ಅಥವಾ 23 ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿಗೆ ಗೆದ್ದುಕೊಡುವುದೇ ನನ್ನ ಗುರಿ ಎಂದು ಯಡಿಯೂರಪ್ಪ ಹೇಳಿದ್ದಾರೆ.