ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಜಾಥ ಹಿನ್ನಲೆ; ಸಿಎಂ ನಿವಾಸದ ಸುತ್ತ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು| pavithra| Last Updated: ಶನಿವಾರ, 15 ಫೆಬ್ರವರಿ 2020 (10:51 IST)
ಬೆಂಗಳೂರು : ಇಂದು ಸಿಎಂ ಬಿಎಸ್ ವೈ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಸಿಎಂ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಇಂದು ಸರ್ಕಾರದ ಕಾರ್ಯವೈಕರ್ಯದ ಬಗ್ಗೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇಂದು ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಪ್ರತಿಭಟನೆಯ ವೇಳೆ ಸಿಎಂ ನಿವಾಸದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ ಇರುವ  ಕಾರಣ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಸಿಎಂ ಬಿಎಸ್ ವೈ ಅವರ ಧವಳಗಿರಿ ನಿವಾಸ ಹಾಗೂ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :