ಆಗಸ್ಟ್ 5ಕ್ಕೆ ಮೊದಲ ಹಂತದ ಸಂಪುಟ ವಿಸ್ತರಣೆ?

bengaluru| geethanjali| Last Modified ಶನಿವಾರ, 31 ಜುಲೈ 2021 (15:02 IST)
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ಮಾಡುವಂತೆ ಬೊಮ್ಮಾಯಿಗೆ ಸಲಹೆ ನೀಡಿದ್ದು, ಕೊರೊನಾ ಸೋಂಕು ಹಾಗೂ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯವಾದ ಖಾತೆಗಳ ಭರ್ತಿಗೆ ಅವಕಾಶ ನೀಡಿದ್ದಾರೆ. ಮೊದಲ ಹಂತದ ಸಚಿವ ಸಂಪುಟ ವಿಸ್ತರಣೆ ಆಗಸ್ಟ್ 5ರಂದು ನಡೆಯುವ ಸಾಧ್ಯತೆ ಇದ್ದು, ಎರಡನೇ ಹಂತದ ಸಂಪುಟ ವಿಸ್ತರಣೆ ಆಷಾಢ ಮಾಸ ಮುಗಿದ ನಂತರ ಸೂಕ್ತ ಸಮಯ ನೋಡಿಕೊಂಡು ಮಾಡಲು ನಿರ್ಧರಿಸಲಾಗಿದೆ.
ಸಂಪುಟ ವಿಸ್ತರಣೆಯಲ್ಲಿ ಸಾಮಾಜಿಕ, ಜಿಲ್ಲಾ ಪ್ರಾತಿನಿಧ್ಯ ಸಮತೋಲನದ ಮೇಲೆ ಗಮಹರಿಸುವಂತೆ ಸೂಚಿಸಲಾಗಿದ್ದು, ಸಾಧ್ಯವಾದಷ್ಟು ಉತ್ಸಾಹಿ ಹಾಗೂ ಯುವ ಶಾಸಕರಿಗೆ ಆದ್ಯತೆ ನೀಡುವಂತೆ ಸೂಚಿಸಲಾಗಿದೆ ಎಂದು ನಡ್ಡಾ ಸೂಚಿಸಿದ್ದಾರೆ ಎನ್ನಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :