ಅನ್ ಲಾಕ್ ಬೆನ್ನಲ್ಲೇ ಬಿಎಂಟಿಸಿ ಬಸ್ ದರ ಶಾಕ್

ಬೆಂಗಳೂರು| Krishnaveni K| Last Modified ಸೋಮವಾರ, 7 ಜೂನ್ 2021 (09:43 IST)
ಬೆಂಗಳೂರು: ಅನ್ ಲಾಕ್ ಬೆನ್ನಲ್ಲೇ ಜನಸಾಮಾನ್ಯರಿಗೆ ಬಿಎಂಟಿಸಿ ಶಾಕ್ ನೀಡಲು ಸಿದ್ಧತೆ ನಡೆಸಿದೆ. ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದೆ.
 

ಅನ್ ಲಾಕ್ ಬಳಿಕ ಬಸ್ ಪ್ರಯಾಣ ದರದಲ್ಲಿ ಶೇ. 18 ರಿಂದ 20 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪವಿಟ್ಟಿದೆ. ಕಳೆದ ಬಾರಿ ಪ್ರಸ್ತಾವನೆ ಸಲ್ಲಿಸಿದಾಗ ತಿರಸ್ಕೃತಗೊಂಡಿತ್ತು.
 
ಆದರೆ ಈಗ ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗೆ ಪುನಶ್ಚೇತನ ನೀಡಲು ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಹೀಗಾಗಿ ಅನ್ ಲಾಕ್ ಬಳಿಕ ಬಸ್ ಆರಂಭವಾದಾಗ ಸಾಮಾನ್ಯ ನಾಗರಿಕರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಶಾಕ್ ನೀಡುವ ಸಾಧ‍್ಯತೆಯಿದೆ.
ಇದರಲ್ಲಿ ಇನ್ನಷ್ಟು ಓದಿ :