ಬೆಂಗಳೂರು|
pavithra|
Last Modified ಶನಿವಾರ, 28 ನವೆಂಬರ್ 2020 (11:42 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಶುಕ್ರವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ಅವರನ್ನು ಕೂಡಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸದ್ಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಕೀಯ ಒತ್ತಡದಿಂದ ಸಂತೋಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.