ಒಕ್ಕಲಿಗ ಅಭಿವೃದ್ಧಿ ಮಂಡಳಿಗೆ ಒತ್ತಾಯಿಸುವೆ ಎಂದ ಡಿಸಿಎಂ

ಬೆಳಗಾವಿ| pavithra| Last Modified ಮಂಗಳವಾರ, 24 ನವೆಂಬರ್ 2020 (11:07 IST)
ಬೆಳಗಾವಿ : ಒಕ್ಕಲಿಗ ಅಭಿವೃದ್ಧಿ ಮಂಡಳಿ ಆಗಲೇಬೇಕು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಒಕ್ಕಲಿಗ ಅಭಿವೃದ್ಧಿ ಮಂಡಳಿಗೆ ಒತ್ತಾಯಿಸುವೆ. ಮರಾಠ ಜನರ ಅಪೇಕ್ಷೆ ಮೇರೆಗೆ ನಿಗಮ ರಚನೆ ಮಾಡಲಾಗುವುದು. ಹಾಗೇ ಒಕ್ಕಲಿಗ ಅಭಿವೃದ್ಧಿ ಮಂಡಳಿಯೂ ಆಗಲಿ ಎಂದು ಎಂದು ತಿಳಿಸಿದ್ದಾರೆ.

ಡಿ.5ರಂದು ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ ವಿಚಾರ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಭ್ಯರ್ಥಿ ಬಗ್ಗೆ ಚರ್ಚೆ ಆಗಲ್ಲ. ಉಪಚುನಾವಣೆಗೆ ಅಭ್ಯರ್ಥಿ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಲಾಗುವುದು. ಮೂರು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ. ಹಾಗೇ ಬಸವಕಲ್ಯಾಣ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳುತ್ತೆ. ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :