Widgets Magazine

ಬಿಜೆಪಿಗೆ ಮತ್ತೆ ಆನೆ ಬಲ ; ಕಾಂಗ್ರೆಸ್ ಶಾಸಕರ ರಾಜೀನಾಮೆ ಎಂದ ಡಿಸಿಎಂ

ಕಲಬುರಗಿ| Jagadeesh| Last Modified ಸೋಮವಾರ, 24 ಫೆಬ್ರವರಿ 2020 (17:31 IST)
ಬಿಜೆಪಿಯಿಂದ 32 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ್ ತಳ್ಳಿಹಾಕಿದ್ದಾರೆ.

ರಾಜೀನಾಮೆ ನೀಡಿ ಪಕ್ಷದಿಂದ ಹೊರಬರುವವರು ಕಾಂಗ್ರೆಸ್ ನವರೇ ಹೊರತು ಬಿಜೆಪಿಯವರು ಅಲ್ಲ ಎಂದು ಹೇಳಿದ್ದಾರೆ.
ಸಿಎಂ ಇಬ್ರಾಹಿಂ ವಿವಾದಾತ್ಮಕವಾಗಿಯೇ ಹೆಚ್ಚು ಮಾತನಾಡುತ್ತಾರೆ. ಹೀಗಾಗಿ ಅವರ ಹೇಳಿಕೆಗೆ ಪ್ರಾಮುಖ್ಯತೆ ಕೊಡುವುದರಲ್ಲಿ ಅರ್ಥವಿಲ್ಲ.

ಬಿಜೆಪಿಗೆ ಯಾವ ಶಾಸಕರು ಬರಲಿದ್ದಾರೆ ಎಂಬುದರ ಕುರಿತು ಮುಂದಿನ ದಿನಗಳಲ್ಲಿ ಅವರಿಗೆ ತಿಳಿದುಬರಲಿದೆ ಅಂತ ಮಾರ್ಮಿಕವಾಗಿ ತಿರುಗೇಟು ನೀಡಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನೇತೃತ್ವದಲ್ಲಿ ಬಿಜೆಪಿ ಆಡಳಿತ ಅವಧಿ ಪೂರೈಸುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ.

 
ಇದರಲ್ಲಿ ಇನ್ನಷ್ಟು ಓದಿ :