ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿದ ಮಾಜಿ ಪ್ರಧಾನಿ ದೇವೇಗೌಡರ ಬೀಗರು

ಮೈಸೂರು| pavithra| Last Modified ಸೋಮವಾರ, 16 ಸೆಪ್ಟಂಬರ್ 2019 (12:01 IST)
ಮೈಸೂರು : ಮಾಜಿ ಸಿಎಂ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರ ಬೀಗರ ಮನೆಯವರು ಅತಿಥಿ ಸತ್ಕಾರ ಮಾಡಿದ್ದಾರೆ.
ಮೈಸೂರಿನ ಬೋಗಾದಿಯಲ್ಲಿರುವ ದೇವೇಗೌಡರ ಬೀಗರಾದ, ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಅವರ ನಿವಾಸಕ್ಕೆ ಇಂದು ಸಿದ್ದರಾಮಯ್ಯನವರು ಭೇಟಿ ನೀಡಿದ್ದರು. ಆ ವೇಳೆ ಅವರ ಮನೆಯಲ್ಲಿ ಸಿದ್ದರಾಮಯ್ಯ ಉಪಹಾರ ಸೇವಿಸಿದ್ದಾರೆ.


ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರೊ. ರಂಗಪ್ಪ, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಇದೊಂದು ಸೌಹಾರ್ದಯುತ ಭೇಟಿ ಎಂದಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಮತ್ತೊಮ್ಮೆ ಈ ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :