ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು| Krishnaveni K| Last Modified ಗುರುವಾರ, 17 ಜೂನ್ 2021 (10:54 IST)
ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.  
> ಚಿಕ್ಕಮಗಳೂರು, ಕೊಡಗು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿದೆ.>   ಕೊಡಗಿನಲ್ಲಿ ಭಾರೀ ಮಳೆಗೆ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಕಳೆದ ವರ್ಷವೂ ಮಳೆ ಈ ಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಈ ಬಾರಿಯೂ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ಈಗಾಗಲೇ ಹೇಳಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿರುವುದಾಗಿ ವರದಿಯಾಗಿದೆ.ಇದರಲ್ಲಿ ಇನ್ನಷ್ಟು ಓದಿ :