ಜು.26ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

bengaluru| Geethanjali| Last Modified ಗುರುವಾರ, 22 ಜುಲೈ 2021 (16:50 IST)
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 23ರಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 24, 25 ಹಾಗೂ 26ರಂದು ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡುಗು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿಭಾರಿ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 23ರಂದು ಆರೆಂಜ್ ಅಲರ್ಟ್ ಹಾಗೂ ಜುಲೈ 24, 25ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜುಲೈ 23ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕದ ಒಳನಾಡಿನಲ್ಲಿ ಮಾನ್ಸೂನ್ ಚುರುಕಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಜಗಲ್ಬೇಟ್‌ನಲ್ಲಿ 19 ಸೆಂ.ಮೀ, ಸೋಮವಾರಪೇಟೆ, ಕೊಡಗಿನ ಭಾಗಮಂಡಲದಲ್ಲಿ ತಲಾ 11 ಸೆಂ.ಮೀ, ಬೆಳಗಾವಿಯ ನಿಪ್ಪಾಣಿಯಲ್ಲಿ 9 ಸೆಂ.ಮೀ, ಹಾಸನದ ಸಕಲೇಶಪುರ, ಆಗುಂಬೆಯಲ್ಲಿ ತಲಾ 10 ಸೆಂ.ಮೀ, ಬೆಳಗಾವಿಯ ನಿಪ್ಪಾಣಿ, ಚಿಕ್ಕಮಗಳೂರಿನ ಕೊಪ್ಪ, ಶೃಂಗೇರಿ, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ತಲಾ 9 ಸೆಂ.ಮೀ, ಹಾಸನದ ಬಲ್ಲುಪೇಟೆ ಚಿಕ್ಕಮಗಳುರಿನ ಕೊಟ್ಟಿಗೆಹಾರ, ತಾಳಗುಪ್ಪದಲ್ಲಿ ತಲಾ 8 ಸೆಂ.ಮೀ, ಉತ್ತರ ಕನ್ನಡದ ಮಂಚಿಕೆರೆಯಲ್ಲಿ 6 ಸೆಂ.ಮೀ, ಯಲ್ಲಾಾಪುರ, ಶಿರಾಲಿ, ಜನ್ಮನೆ, ಕಾರ್ಕಳ, ಸಂಕೇಶ್ವರ, ಚಿಕ್ಕೋಡಿ, ಅಜ್ಜಂಪುರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :