ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದರೆ ಹುಷಾರ್

ಉತ್ತರ ಕನ್ನಡ| Jagadeesh| Last Modified ಬುಧವಾರ, 8 ಜುಲೈ 2020 (17:21 IST)
ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶವ ಸಂಸ್ಕಾರವನ್ನು ರುದ್ರಭೂಮಿಯಲ್ಲಿ ನಡೆಸಲು ಇನ್ನು ಮುಂದೆ ಯಾರೂ ಅಡ್ಡಿಪಡಿಸುವಂತಿಲ್ಲ.

ಒಂದು ವೇಳೆ ಅಡ್ಡಿಪಡಿಸಿದರೆ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ.ಹರೀಶಕುಮಾರ ಕೆ. ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಮಾತ್ರವಲ್ಲದೇ ಯಾವುದೇ ಸಾಂಕ್ರಾಮಿಕ ಕಾಯಿಲೆಯಿಂದ ವ್ಯಕ್ತಿ ಮರಣಹೊಂದಿದಾಗ ಆ ವ್ಯಕ್ತಿಯ ಶವ ಸಂಸ್ಕಾರವನ್ನು ರುದ್ರಭೂಮಿಯಲ್ಲಿ ಮಾಡುವ ಅಧಿಕಾರ ಸ್ಥಳೀಯ ಸಂಸ್ಥೆ ಮತ್ತು ಅಧಿಕಾರಿಗಳಿಗಿದೆ.

ಇದನ್ನು ವಿರೋಧಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :