Widgets Magazine

ಇನ್ನು ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ- ಸಿಎಂ ಬಿಎಸ್ ಯಡಿಯೂರಪ್ಪ

ಹಾವೇರಿ| pavithra| Last Modified ಶುಕ್ರವಾರ, 29 ನವೆಂಬರ್ 2019 (11:36 IST)
ಹಾವೇರಿ : ಇನ್ನುಮೂರುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ನಮಗೆ ಯಾರ ಸಹಕಾರವೂ ಬೇಡ. ಬಹುಮತ ಬಂದೇ ಬರುತ್ತೆ. ಬೇರೆಯವರು ರಚಿಸೋ ಪ್ರಮೇಯವೇ ಬರೋದಿಲ್ಲ ಎಂದು ಹೇಳಿದ್ದಾರೆ.


ಹಾಗೇ ಉಪಚುನಾವಣೆ ನಡೆಯುತ್ತಿರೋ 15 ಕ್ಷೇತ್ರಗಳಲ್ಲೂ ಗೆಲುವು ನಮ್ಮದೆ . ಯಾರು ಏನೇ ಹೇಳಿದ್ರೂ ಮತದಾರರು ನಮ್ಮ ಪರವಾಗಿದ್ದಾರೆ. ಇನ್ನುಮೂರುವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಸಿದ್ದರಾಮಯ್ಯ ಮೂರೂವರೆ ವರ್ಷ ವಿಪಕ್ಷದಲ್ಲಿಯೇ ಇರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :