ಐಟಿ ದಾಳಿ: ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣಗೆ ಸಮನ್ಸ್

ತುಮಕೂರು| Vinod| Last Modified ಶುಕ್ರವಾರ, 30 ಡಿಸೆಂಬರ್ 2016 (16:35 IST)
ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣ ಅವರಿಗೆ ಐಟಿ ಜಂಟಿ ಆಯುಕ್ತೆ ನಂದಿನಿ ದಾಸ್ ಅವರು ಸಮನ್ಸ್ ಜಾರಿ ಮಾಡಿ ಖುದ್ದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.


ಐಟಿ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಡಿಸಿಸಿ ಬ್ಯಾಂಕ್ ವಹಿವಾಟು ಪರಿಶೀಲನೆ ನಡೆಸುತ್ತಿದ್ದಾರೆ. ನವೆಂಬರ್ 10 ರಿಂದ 15ರವರೆಗೆ 100 ಕೋಟಿ ರೂಪಾಯಿ ಹಳೇ ನೋಟುಗಳು ಡಿಪಾಸಿಟ್ ಆಗಿದ್ದು, ಮೂರು ಲಾಕರ್ ಕೀಗಳು ನಾಪತ್ತೆಯಾಗಿವೆ. ಅದಲ್ಲದೆ ಪರಿಶೀಲನೆ ವೇಳೆ ಬ್ಯಾಂಕ್ ಸಿಬ್ಬಂದಿ ಗೊಂದಲದ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಕೆ.ಎನ್.ರಾಜಣ್ಣ, ನನಗೆ ಈವರೆಗೂ ಯಾವುದೇ ನೋಟಿಸ್ ತಲುಪಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್

ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :