ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ದಾಳಿ!

ಬೆಳಗಾವಿ| Vinod| Last Modified ಗುರುವಾರ, 19 ಜನವರಿ 2017 (11:49 IST)
ಇಂದು ಬೆಳ್ಳಂಬೆಳಗ್ಗೆ ಕುಂದಾನಗರಿ ಬೆಳಗಾವಿಯ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬಾಳ್ಕರ್ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್ ಜಾರಕಿಹೊಳಿ ಮನೆಯ ಮೇಲೆ ಐಟಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.


ಬೆಳಗಾವಿಯ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬಾಳ್ಕರ್ ಹಾಗೂ ಗೋಕಾಕ ಪಟ್ಟದಲ್ಲಿರುವ ಜಾರಕಿಹೊಳಿ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
500, 1000 ಮುಖಬೆಲೆಯ ನೋಟ್ ಬ್ಯಾನ್ ಬಳಿಕ ದೇಶಾದ್ಯಂತ ಐಟಿ ಅಧಿಕಾರಿಗಳು ಸಂಚಲನ ಮೂಡಿಸುತ್ತಿದ್ದು, ಇಂದು ಮುಂಜಾನೆ ಕುಂದಾನಗರಿಯ ಕಾಂಗ್ರೆಸ್ ನಾಯಕರಿಗೆ ಬಿಸಿ ಮುಟ್ಟಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ


ಇದರಲ್ಲಿ ಇನ್ನಷ್ಟು ಓದಿ :