ಅನಂತ್‌, ಡಿ.ವಿಎಸ್‌, ಬಿಎಸ್‌ವೈಗೆ ಸಚಿವ ಸ್ಥಾನ ನೀಡಿ: ಈಶ್ವರಪ್ಪ

ನವದೆಹಲಿ| Rajesh patil| Last Modified ಭಾನುವಾರ, 18 ಮೇ 2014 (12:40 IST)
ಕೇಂದ್ರ ಮಂತ್ರಿಮಂಡಲದಲ್ಲಿ ರಾಜ್ಯ ನಾಯಕರಾದ ಅನಂತ್‌ಕುಮಾರ್, ಡಿ.ವಿ ಸದಾನಂದಗೌಡ ಹಾಗೂ ಬಿ.ಎಸ್ ಯಡಿಯೂರಪ್ಪನವರಿಗೆ ಸ್ಥಾನ ನೀಡಬೇಕು ಎಂದು ವರಿಷ್ಠರಿಗೆ ಒತ್ತಡ ಹೇರಲಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಇಂದು ಮದ್ಯಾಹ್ನ ಅರುಣ್ ಜೇಟ್ಲಿ ಮತ್ತು ರಾಜನಾಥ್ ಸಿಂಗ್ ಅವರು ಭೇಟಿ ಮಾಡಿ, ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಸಂಸದರಿಗೆ ಮಂತ್ರಿಮಂಡಲದಲ್ಲಿ ಸ್ಥಾನ ನೀಡುವಂತೆ ಬೇಡಿಕೆ ಇಡುತ್ತೇವೆ ಎಂದು ಅವರು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :