ಲಾಕ್ ಡೌನ್ ವಿಸ್ತರಣೆಗೆ ವೀಕೆಂಡ್ ಡಿಸೈಡರ್

ಬೆಂಗಳೂರು| Krishnaveni K| Last Modified ಮಂಗಳವಾರ, 1 ಜೂನ್ 2021 (09:06 IST)
ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಈ ವೀಕೆಂಡ್  ನಿರ್ಣಾಯಕವಾಗಲಿದೆ.
 > ಜೂನ್ 5,6 ರಂದು ಪಾಸಿಟಿವಿಟಿ ದರ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆಯಾಗಬೇಕೇ ಅಥವಾ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಆರಂಭಿಸಬೇಕೇ ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.>   ಈ ಬಗ್ಗೆ ಸಚಿವ ಜಗದೀಶ್ ಶೆಟ್ಟರ್, ಆರ್ ಅಶೋಕ್ ಮಾಹಿತಿ ನೀಡಿದ್ದಾರೆ. ಅನ್ ಲಾಕ್ ಬಗ್ಗೆ ಸಿಎಂ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯಕ್ಕೆ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿದೆ. ಈ ವಾರದಲ್ಲಿ ಇನ್ನಷ್ಟು ಸುಧಾರಣೆ ಕಂಡುಬಂದರೆ ಮುಂದಿನ ವಾರ ಲಾಕ್ ಡೌನ್ ಕೊನೆಯಾಗಲಿದೆ.ಇದರಲ್ಲಿ ಇನ್ನಷ್ಟು ಓದಿ :