Widgets Magazine

ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ಇಂದು ಬೃಹತ್ ಸಮಾವೇಶ

ಮಂಗಳೂರು| pavithra| Last Modified ಬುಧವಾರ, 15 ಜನವರಿ 2020 (09:51 IST)
ಮಂಗಳೂರು : ವಿರೋಧಿಸಿ ಮಂಗಳೂರಿನಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಹೋರಾಟಕ್ಕೆ ಕರೆ ನೀಡಿದ್ದು, ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ಇಂದು ಮಧ್ಯಾಹ್ನ 2.30 ಕ್ಕೆ ಸಮಾವೇಶ ನಡೆಯಲಿದೆ. ಸಮಾವೇಶ ಸ್ಥಳದಲ್ಲಿ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶ ವೀಕ್ಷಿಸಲು ಎಲ್ ಇಡಿ ಸ್ಕ್ರೀನ್ ಗಳ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದು, ಒಟ್ಟು 500 ಪೊಲೀಸ್ ಸಿಬ್ಬಂದಿಗಳ ನಿಯೋಜನೆ  ಮಾಡಲಾಗಿದೆ.


ಅಲ್ಲದೇ ಸಮಾವೇಶದಲ್ಲಿ ಹೊರ ರಾಜ್ಯದವರಿಗೆ ನಿರ್ಬಂಧ ಹೇರಲಾಗಿದೆ. ಕೇರಳದಿಂದ ಸಮಾವೇಶಕ್ಕೆ ಜನರು ಆಗಮಿಸುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಕರ್ನಾಟಕ-ಗಡಿಭಾಗದಲ್ಲಿ ಪೊಲೀಸರಿಂದ ತಪಾಸಣೆ ನಡೆಸಲಾಗುತ್ತಿದೆ.

ಇದರಲ್ಲಿ ಇನ್ನಷ್ಟು ಓದಿ :