ಸಿದ್ದರಾಮಯ್ಯ ವಿರುದ್ಧ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ದಾವಣಗೆರೆ| pavithra| Last Modified ಬುಧವಾರ, 6 ಜನವರಿ 2021 (11:56 IST)
ದಾವಣಗೆರೆ : ಕುರುಬ ಸಮುದಾಯದ ಎಸ್ ಟಿ ಮೀಸಲಾತಿ ಹೋರಾಟ ವಿಚಾರ ಇದರ ಹಿಂದೆ ಆರ್.ಎಸ್.ಎಸ್ ಕೈವಾಡವಿದೆ ಎಂದು ಆರೋಪ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹೋರಾಟದ ಹಿಂದೆ ಆರ್.ಎಸ್.ಎಸ್ ಕೈವಾಡವಿಲ್ಲ. ಸಿದ್ದರಾಮಯ್ಯ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಆರ್.ಎಸ್.ಎಸ್ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತೆ ಎಂದು ಹೇಳಿದ್ದಾರೆ.

ಅಲ್ಲದೇ ಅಸ್ತಿತ್ವ ಉಳಿಸಿಕೊಳ್ಳಲು ಸಿದ್ದು ಹೋರಾಟ ಮಾಡುತ್ತಿದ್ದಾರೆ. ಡಿಕೆಶಿ ಮೇಲೆ ಸಿದ್ದರಾಮಯ್ಯ ಗೆ ಕೋಪವಿದೆ. ಸಿದ್ದು ನಾನೇ ಸಿಎಂ ಎಂದು ಹೇಳ್ತಾನೆ ಇದ್ದಾರೆ. ಬಾದಾಮಿ ಗ್ರಾ.ಪಂ.ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಗೆದ್ದಿರೋದೆ 8 ಸ್ಥಾನ. ಬಿಜೆಪಿ ಬೆಂಬಲಿತ 18 ಸದಸ್ಯರು ಗೆದ್ದಿದ್ದಾರೆ. ಬಾದಾಮಿಯಲ್ಲಿ ಕಾಂಗ್ರೆಸ್ ಬುಡಮೇಲಾಗಿದೆ. ಹೀಗಾಗಿ ಬಾದಾಮಿಗೆ ಓಡಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಟೀಲ್ ಕಿಡಿಕಾರಿದ್ದಾರೆ.  ಇದರಲ್ಲಿ ಇನ್ನಷ್ಟು ಓದಿ :