Widgets Magazine

ಡಿ. 9ರ ನಂತರ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲ- ಹೆಚ್.ಡಿ.ದೇವೇಗೌಡ ಸ್ಪಷ್ಟನೆ

ಬೆಳಗಾವಿ| pavithra| Last Modified ಸೋಮವಾರ, 2 ಡಿಸೆಂಬರ್ 2019 (11:46 IST)
ಬೆಳಗಾವಿ : ಡಿ. 9ರ ನಂತರ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ಹೇಳಿದ್ದಾರೆ.


ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಅತಂತ್ರ ಪರಿಸ್ಥಿತಿ ಎದುರಾದರೆ ಕಾಂಗ್ರೆಸ್ –ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಂಡು  ಸರ್ಕಾರ ರಚನೆ ಮಾಡುತ್ತಾರೆ ಎಂಬ ಮಾತು ಕೇಳಿಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕೂಡ ಒಲವು ತೋರಿಸಿದ್ದಾರೆ.


ಆದರೆ ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಈಗಾಗಲೇ ಬಿಜೆಪಿ, ಕಾಂಗ್ರೆಸ್ ಜೊತೆ ಮೈತ್ರಿ  ಮಾಡಿಕೊಂಡು ಸಂಕಷ್ಟ ಅನುಭವಿಸಿದ್ದೇವೆ. ನಾವು ವಿರೋಧ ಪಕ್ಷದ ಸ್ಥಾನದಲ್ಲಿ ಕುತುಕೊಳ್ಳುತ್ತೇವೆ, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :