ಅನಾರೋಗ್ಯದ ಹಿನ್ನಲೆ; ಉಡುಪಿ ಪೇಜಾವರ ಮಠದ ಶ್ರೀಗಳು ಆಸ್ಪತ್ರೆಗೆ ದಾಖಲು

ಉಡುಪಿ| pavithra| Last Modified ಶುಕ್ರವಾರ, 20 ಡಿಸೆಂಬರ್ 2019 (11:00 IST)
ಉಡುಪಿ: ಉಡುಪಿ ಪೇಜಾವರ ಮಠದ  ವಿಶ್ವೇಶತೀರ್ಥ ಶ್ರೀಗಳಿಗೆ ಅನಾರೋಗ್ಯ ಸಮಸ್ಯೆ  ಹಿನ್ನಲೆಯಲ್ಲಿ ಇಂದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಪೇಜಾವರ ಶ್ರೀಗಳಿಗೆ ಆಗಾಗ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಇಂದು ಮುಂಜಾನೆ 3 ಗಂಟೆಗೆ ಶ್ರೀಗಳಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ  ತಕ್ಷಣ ಅವರನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 
ಇದರಲ್ಲಿ ಇನ್ನಷ್ಟು ಓದಿ :