ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ; ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ ಸಿಎಂ

ಬೆಂಗಳೂರು| pavithra| Last Modified ಶುಕ್ರವಾರ, 20 ಡಿಸೆಂಬರ್ 2019 (10:32 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನಲೆ ಮಾಧ್ಯಮಗಳಿಗೆ  ಹೇಳಿಕೆ ನೀಡುವ ವೇಳೆ ಎಚ್ಚರಿಕೆ ವಹಿಸಲು ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.ಈಗಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ನಡುವೆ ಕೆಲವು ಶಾಸಕರು ಹಾಗು ಸಚಿವರಿಂದ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಮತ್ತಷ್ಟು ಗಲಭೆ ಗದ್ದಲ ಹೆಚ್ಚಾಗಲು ಕಾರಣವಾಗಿದೆ.
ಆದಕಾರಣ ಸಿಎಂ ಯಡಿಯೂರಪ್ಪ, ಸಚಿವರು ಹಾಗೂ ಶಾಸಕರಿಗೆ ಮತೀಯ ಭಾವನೆ ಕೆರಳಿಸುವ ಹೇಳಿಕೆ ನೀಡದಂತೆ ತಿಳಿಸಿದ್ದಾರೆ. ಬಾಯಿಗೆ ಬಂದಂತೆ ಮಾತನಾಡದಂತೆ ಸೂಚಿಸಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :