ಸಂತೋಷ್ ವಿಚಾರವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ – ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮೈಸೂರು| pavithra| Last Modified ಸೋಮವಾರ, 30 ನವೆಂಬರ್ 2020 (10:56 IST)
ಮೈಸೂರು : ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಕೇಸ್ ಗೆ ಸಂಬಂಧಿಸಿದಂತೆ ಸಂತೋಷ್ ವಿಚಾರವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧರಾಜ್ಯ ಬಿಜೆಪಿ ಉಪಾಧ್ಯಕ್ಷ  ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಉಪಚುನಾವಣೆಯ ಸೋಲಿನ ಹತಾಶೆಯಿಂದ ಮಾತನಾಡುತ್ತಿದ್ದಾರೆ, 2 ಕ್ಷೇತ್ರದ ಉಪಚುನಾವಣೆಯಲ್ಲಿ ಸೋತಿದ್ದಾರೆ. ಸಂತೋಷ್ ವಿಚಾರ ರಾಜಕೀಯಕ್ಕೆ ಬಳಸ್ತಿದ್ದಾರೆ. ಈ ರೀತಿ ವಿಚಾರಗಳನ್ನು ಹುಡುಕುತ್ತಾ ರಾಜಕರಣ ಮಾಡ್ತಿದ್ದಾರೆ ಎಂದು  ಡಿಕೆ ಶಿವಕುಮಾರ್ ವಿರುದ್ಧ  ಕಿಡಿಕಾರಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :