ಡಿಸೆಂಬರ್ 5ರ ಬಂದ್ ಸಂಬಂಧ; ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸಭೆ

ಬೆಂಗಳೂರು| pavithra| Last Modified ಬುಧವಾರ, 25 ನವೆಂಬರ್ 2020 (11:31 IST)
ಬೆಂಗಳೂರು : ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಬಂದ್ ಗೆ ಕರೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 5ರ ಬಂದ್ ಸಂಬಂಧ ಇಂದು ಮತ್ತೊಮ್ಮೆ ಸಭೆ ನಡೆಸಲಾಗುತ್ತಿದೆ.

ಇಂದು ಬೆಳಿಗ್ಗೆ 11.30ಕ್ಕೆ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗಿದೆ.  ಕನ್ನಡಪರ ಸಂಘಟನೆಗಳ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ, ಇಂದು ಡಿಸೆಂಬರ್ 5ರ ರಾಜ್ಯ ಬಂದ್ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.

ಸಭೆಯಲ್ಲಿ ಕನ್ನಡ ಪರ ಹೋರಾಟಗಾರರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಮುಖ್ಯಮಂತ್ರಿ ಚಂದ್ರು, ಸಾ.ರಾ.ಗೋವಿಂದ್, ವಕೀಲರ ಸಂಘದ ಅಧ್ಯಕ್ಷ ರಂಗನಾಥ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಓಲಾ, ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :